ಬಾರ್ ಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಮದ್ಯ ಕಳವು

Update: 2018-12-26 17:33 GMT

ಮಂಡ್ಯ,ಡಿ.26: ಮಳವಳ್ಳಿ ತಾಲೂಕಿನ ಹುಸ್ಕೂರು ಗ್ರಾಮದ ಬಾರ್ ವೊಂದರಲ್ಲಿ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಮದ್ಯವನ್ನು ಕಳವು ಮಾಡಿದ್ದಾರೆ.

ಮಂಗಳವಾರ ತಡರಾತ್ರಿ ಹುಸ್ಕೂರು ಗ್ರಾಮದಲ್ಲಿ ಯೋಗಾನಂದ ಬಾರ್‍ಗೆ ಕನ್ನ ಹಾಕಿರುವ ದುಷ್ಕರ್ಮಿಗಳು ಸುಮಾರು 2 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ 70 ಕೇಸ್ ಮದ್ಯವನ್ನು ಕಳವು ಮಾಡಿದ್ದಾರೆ.

ಬಾರ್ ನ ಹಿಂಬಾಗಿಲು ಮುರಿದು ಕಳವು ಮಾಡಿದ್ದು, ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದೇ ರೀತಿ ಡಿ.11 ರಂದು ಮಳವಳ್ಳಿ ತಾಲೂಕಿನ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ಬಾರ್ ನಲ್ಲಿ ಕಳವು ಮಾಡಿ, ಮದ್ಯವನ್ನು ತೆಗೆದುಕೊಂಡು ಹೋಗಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News