ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2018-12-27 14:20 GMT

ಬೆಂಗಳೂರು, ಡಿ. 27: ‘ಕನ್ನಡ ಭಾಷೆ ಕಲಿಕೆ ಮತ್ತು ಕನ್ನಡ ಮಾಧ್ಯಮದ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು. ನಾನು ಹೈಸ್ಕೂಲ್ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ಕಲಿತವನು. ನಾನೇನು ಪೆದ್ದನಾ? ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಬೇಕು’ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಗುರುವಾರ ಈ ವಿಷಯದ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜತೆ ಸಮಾಲೋಚನೆ ನಡೆಸಲಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News