ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ?

Update: 2018-12-27 15:33 GMT

ಮೈಸೂರು,ಡಿ.27: ಅನಾರೋಗ್ಯದ ಕಾರಣ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಮಹತ್ವದ ಬದಲಾವಣೆ ತರಲು ಇತ್ತೀಚೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ವಿಶ್ವನಾಥ್ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ್ದರು. ಆದರೆ ವಿಶ್ವನಾಥ್ ಅವರ ಆರೋಗ್ಯ ಸರಿಯಿಲ್ಲದ ಕಾರಣ ವೈದ್ಯರ ಸೂಚನೆ ಮೇರೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚೆಗಷ್ಟೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು, ಹೆಚ್ಚು ಓಡಾಡದಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಪಕ್ಷದ ಸಂಘಟನೆ ಮತ್ತು ಭವಿಷ್ಯದ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News