ಜ.2ಕ್ಕೆ ಚಲನಚಿತ್ರ ಪ್ರಶಸ್ತಿ ಸಮಾರಂಭ
ಬೆಂಗಳೂರು, ಡಿ.27: ಕನ್ನಡ ಚಿತ್ರ ಪ್ರೇಮಿಗಳ ಸಂಘದ ವತಿಯಿಂದ 49ನೇ ವರ್ಷದ ಚಲನಚಿತ್ರ ಪ್ರಶಸ್ತಿಯನ್ನು ಜ.2ರಂದು ಸಂಜೆ 6ಗಂಟೆಗೆ ಜೆಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದಾನ ಮಾಡಲಿದ್ದೇವೆ ಎಂದು ಸಂಘದ ಅಧ್ಯಕ್ಷ ಕೆ.ಮೋಹನ್ ದೇವ್ ಆಳ್ವಾ ತಿಳಿಸಿದ್ದಾರೆ.
ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ.ರೆಬಲ್ ಸ್ಟಾರ್ ಅಂಬರೀಶ್ ನೆನಪಿನಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಹಾಸ್ಯ ಕಲಾವಿದ ದೊಡ್ಡಣ್ಣನವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಇದೇ ಅಲ್ಲದೆ, ಸಹ ಕಲಾವಿದರಿಗೂ ವಿವಿಧ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.
ಸಮಾರಂಭವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡ ಉದ್ಘಾಟಿಸಲಿದ್ದು, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್, ಚಲನಚಿತ್ರ ನಿರ್ದೇಶಕ ನಾಗಾಭರಣ ಹಾಗೂ ಪಂಚಭಾಷಾ ನಟಿ ಡಾ.ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.