×
Ad

ಹೊಸ ವರ್ಷಕ್ಕೆ 800 ಸ್ಥಳಗಳಲ್ಲಿ ಉಚಿತ ವೈಫೈ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

Update: 2018-12-27 22:15 IST

ಬೆಂಗಳೂರು, ಡಿ.27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 6,000 ಸ್ಥಳಗಳಲ್ಲಿ ವೈಫೈ ಅಳವಡಿಸಲು ನಾಲ್ಕು ಸಂಸ್ಥೆಗಳಿಗೆ ಆದೇಶ ನೀಡಲಾಗಿದೆ. ಅದರಂತೆ ಈಗಾಗಲೇ 800 ಸ್ಥಳ ಗುರುತಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಗುರುವಾರ ನಡೆದ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ಅವರು, ಜನವರಿ ಅಂತ್ಯದೊಳಗೆ 800 ಸ್ಥಳಗಳಲ್ಲಿ ಉಚಿತ ವೈಫೈಯನ್ನು ಅಳವಡಿಸಲಾಗುತ್ತದೆ. ಏಪ್ರಿಲ್ ತಿಂಗಳೊಳಗಾಗಿ 3,500 ಕಡೆ ವೈಫೈ ಅಳವಡಿಸಲು ಸೂಚನೆ ನೀಡಲಾಗಿದೆ. ಅಲ್ಲದೆ, ಆಸ್ತಿ ತೆರಿಗೆ ಸಂಗ್ರಹ ವಿಚಾರದಲ್ಲಿ ಹಲವು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. 2016-17ರಲ್ಲಿ 1998 ಕೋಟಿ ರೂ., 2017-18ರಲ್ಲಿ 2,130 ಕೋಟಿ ರೂ., 2018-19ನೇ ಸಾಲಿನಲ್ಲಿ ಈಗಾಗಲೇ 2,185 ಕೋಟಿ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ತೆರಿಗೆ ಸಂಗ್ರಹದಲ್ಲಿ ಹೆಚ್ಚಳ: ಹಿಂದಿನ ವರ್ಷಗಳಿಗಿಂತ ಈ ವರ್ಷ ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿದ್ದು, ಉಳಿದ ಮೂರು ತಿಂಗಳಲ್ಲಿ 500 ಕೋಟಿ ರೂ. ತೆರಿಗೆ ವಸೂಲಿ ಮಾಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದರು.

ಆಸ್ತಿ ತೆರಿಗೆ ಸಂಗ್ರಹ ವಿಚಾರದಲ್ಲಿ ಈಗಾಗಲೇ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದೇವೆ. 2016-17ರಲ್ಲಿ 1,998 ಕೋಟಿ ರೂ., 2017-18ರಲ್ಲಿ 2,130 ಕೋಟಿ ರೂ., 2018-19ನೇ ಸಾಲಿನಲ್ಲಿ ಈಗಾಗಲೇ 2,185 ಕೋಟಿ ಸಂಗ್ರಹಿಸಲಾಗಿದೆ. ತೆರಿಗೆ ಸಂಗ್ರಹಿಸಲು ಇನ್ನೂ ಮೂರು ತಿಂಗಳ ಕಾಲಾವಕಾಶವಿದ್ದು, ಕನಿಷ್ಠ 500 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಲಾಗಿದೆ. ಅಲ್ಲದೆ, ಹೆಚ್ಚು ಪ್ರಮಾಣದ ಆಸ್ತಿ ತೆರಿಗೆ ಪಾವತಿಸದೆ ಹಾಗೆಯೇ ಬಾಕಿ ಉಳಿಸಿಕೊಂಡಿದ್ದಾರೋ, ಅಂತಹವರಿಗೆ ನೋಟಿಸ್ ಜಾರಿಗೊಳಿಸಿ ಚರಾಸ್ತಿಗಳನ್ನು ಜಪ್ತಿ ಮಾಡಲು ಕಂದಾಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೆ ಟೋಟಲ್ ಸ್ಟೇಷನ್ ಸರ್ವೆಯಲ್ಲಿ 250 ಕೋಟಿ ರು. ಬರಬೇಕಿದ್ದು, ಆ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News