ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Update: 2018-12-28 11:34 GMT

ಬಂಟ್ವಾಳ, ಡಿ. 28: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ 2018-19ನೆ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶುಕ್ರವಾರ ಶಾಲೆಯಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ಬೆಂಗಳೂರಿನ ಹೈಕೋರ್ಟ್ ವಕೀಲ ರಾಜಶೇಖರ್ ಭಾಗವಹಿಸಿ ಮಾತನಾಡಿದರು.

ಸಂಸ್ಕಾರ ಭಾರತಿ ಮಂಗಳೂರು ಇದರ ಅಧ್ಯಕ್ಷ, ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಮಾತನಾಡಿ, ಶಿಕ್ಷಣ ಮಗುವಿಗೆ ವಿದ್ಯೆಯೊಂದಿಗೆ ವಿನಯ, ಸಂಸ್ಕಾರ ನೀಡುವಂತಹ ದೇಗುಲವಾಗಬೇಕು ಎಂದರು.

ಕರ್ನಾಟಕ ಮೊಗೇರ ಸಂಘದ ಮಾಜಿ ವಲಯಾಧ್ಯಕ್ಷ ಸುಂದರ್ ಮೇರಾ ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ರಾಜೇಂದ್ರ ಎನ್. ಹೊಳ್ಳ, ಮೀನಾಕ್ಷಿ ಸುಂದರ್, ಶ್ರೀರಾಮ ವಿದ್ಯಾ ಕೇಂದ್ರದ ಸಹ ಸಂಚಾಲಕ ರಮೇಶ್ ಎನ್., ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಕುಮಾರಿ, ಪ್ರೌಢಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾರೀರಿಕ ಹಾಗೂ ಬೌದ್ಧಿಕ ಸ್ಪರ್ಧೆಗಳ ವಿಜೇತರಿಗೆ ಈ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿದ್ಯಾರ್ಥಿಗಳಾದ ವೈಷ್ಣವಿ ಸ್ವಾಗತಿಸಿದರು. ಅರ್ಚನಾ ವಂದಿಸಿದರು. ಸೌಭಾಗ್ಯಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News