×
Ad

ಪ್ರಧಾನಿ ಮೋದಿ ಸಹಿಯನ್ನೆ ನಕಲಿ ಮಾಡಿದ ಭೂಪ !

Update: 2018-12-28 19:48 IST

ಬೆಂಗಳೂರು, ಡಿ.28: ರಾಜ್ಯ ಹೈಕೋರ್ಟ್‌ನಲ್ಲಿ ಕೆಲಸ ಪಡೆಯುವ ಸಲುವಾಗಿ ಯುವಕನೋರ್ವ ಪ್ರಧಾನಿ ನರೇಂದ್ರ ಮೋದಿ ಅವರ ನಕಲಿ ಸಹಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬೆಳಗಾವಿ ಮೂಲದ ಸಂಜಯ್ ಕುಮಾರ್(30) ಎಂಬಾತ ನಕಲಿ ಸಹಿ ಮಾಡಿರುವ ವ್ಯಕ್ತಿ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಹೈಕೋರ್ಟ್ ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ವೇಳೆ ಆರೋಪಿ ಸಂಜಯ್ ಕುಮಾರ್ ಕೂಡ ಅರ್ಜಿ ಸಲ್ಲಿಸಿದ್ದ. ಆದರೆ, ಅರ್ಜಿ ಜೊತೆಗೆ ಪ್ರಧಾನಿ ಮೋದಿ ಹೆಸರಲ್ಲಿ ನಕಲಿ ಪತ್ರವನ್ನು ರಾಜೇಶ್ವರಿ ಹೈಕೋರ್ಟ್ ಡೆಪ್ಯುಟಿ ರಿಜಿಸ್ಟ್ರಾರ್ ಹೆಸರಿಗೆ ರವಾನಿಸಿದ್ದ ಎನ್ನಲಾಗಿದೆ.

ಇದರಿಂದ ಅನುಮಾನಗೊಂಡ ರಿಜಿಸ್ಟ್ರಾರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ನಕಲಿ ಸಹಿ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News