×
Ad

ಎಂ.ಕೆ ವಿಶಾಲಾಕ್ಷಿಗೆ ಸಚಿವಾಲಯ ಕಾರ್ಯದರ್ಶಿ ಹುದ್ದೆ ಕಾರ್ಯಭಾರ

Update: 2018-12-29 20:22 IST

ಬೆಂಗಳೂರು, ಡಿ. 29: ವಿಧಾನಸಭೆ ಸಚಿವಾಲಯ ಕಾರ್ಯದರ್ಶಿ ಎಸ್.ಮೂರ್ತಿ ಅಮಾನತಿನ ಹಿನ್ನೆಲೆಯಲ್ಲಿ ಸಚಿವಾಲಯದ ಕಾರ್ಯಗಳ ಹಿತದೃಷ್ಟಿಯಿಂದ ಸಚಿವಾಲಯ ನಿರ್ದೇಶಕಿ ಎಂ.ಕೆ.ವಿಶಾಲಾಕ್ಷಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾರ್ಯದರ್ಶಿ ಹುದ್ದೆ ಕಾರ್ಯಭಾರ ವಹಿಸಿ ಆದೇಶ ಹೊರಡಿಸಲಾಗಿದೆ.

ಸದರಿ ಅಧಿಕಾರಿಯೂ ವಿಧಾನಸಭೆ ಸ್ಪೀಕರ್ ಅವರ ಕಾರ್ಯ ಚಟುವಟಿಕೆಗಳಿಗೆ ನೆರವಾಗುವುದರ ಜೊತೆಗೆ ಸಚಿವಾಲಯದ ಎಲ್ಲ ಕೆಲಸ-ಕಾರ್ಯಗಳನ್ನು ಉಸ್ತುವಾರಿ ವಹಿಸಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News