×
Ad

ಸಾರ್ವಜನಿಕ ಗ್ರಂಥಾಲಯ ಇಲಾಖೆ: 2018ನೆ ಸಾಲಿನ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ

Update: 2018-12-29 22:56 IST

ಬೆಂಗಳೂರು, ಡಿ.29: ಸಾರ್ವಜನಿಕ ಗ್ರಂಥಾಲಯ ಇಲಾಖೆ 2018ನೆ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2018ನೆ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ 2019ರ ಜ.30 ರೊಳಗೆ ಕಾಪಿರೈಟ್ ಮಾಡಿಸಿರಬೇಕು. ಕಾಪಿರೈಟ್ ಮಾಡಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯಗೋಪುರ, 4ನೆ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂ.1 ಇಲ್ಲಿಗೆ ಜ.31ರ ಒಳಗಾಗಿ ಸಲ್ಲಿಸಬಹುದಾಗಿದೆ.

ಅವಧಿಯ ನಂತರ ಬರುವ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಅರ್ಜಿ ಮತ್ತು ನಿಬಂಧನೆಗಳನ್ನು ಇಲಾಖಾ ಅಂತರ್ಜಾಲ www.karnatakapubliclibrary.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ಮುಖ್ಯಗ್ರಂಥಾಲಯಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ದೂ. 080-22864990, 2286358 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News