ಜ.3ಕ್ಕೆ ಮುಖ್ಯಮಂತ್ರಿಗಳ ಮನೆ ಮುಂದೆ ರೈತಸಂಘ ಪ್ರತಿಭಟನೆ

Update: 2018-12-29 17:27 GMT

ಬೆಂಗಳೂರು, ಡಿ.29: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ 18 ಕಿಮೀ ವ್ಯಾಪ್ತಿಯ ಸರಕಾರಿ ಭೂಮಿಯಲ್ಲಿ ಬೇಸಾಯ ಮಾಡುತ್ತಿರುವ ಬಡರೈತರಿಗೆ ಪಾರಂ ನಂ.57ರ ಅಡಿಯಲ್ಲಿ ಅರ್ಜಿ ಹಾಕಿಕೊಳ್ಳಲು ಅವಕಾಶ ನೀಡದಿರುವುದನ್ನು ಪ್ರತಿಭಟಿಸಿ ಜ.3ರಂದು ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ಪ್ರಾಂತ ರೈತ ಸಂಘ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ಎನ್.ವೆಂಕಟಾಚಲಯ್ಯ, ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಿದ ನಂತರ, ಮಧ್ಯಾಹ್ನ 12ಗಂಟೆಗೆ ಪುರಸಭೆಯಿಂದ ಸ್ವಾತಂತ್ರ ಉದ್ಯಾನವನದವರೆಗೂ ಮೆರವಣಿಗೆಯನ್ನು ಮಾಡಲಾಗುತ್ತದೆ. ಬೆಂಗಳೂರು ನಗರದಿಂದ 18ಕಿಮೀ ವ್ಯಾಪ್ತಿಯಲ್ಲಿ ಅರ್ಜಿ ಹಾಕಿಕೊಳ್ಳಲು ಪಾರಂ ನಂ.57 ಅವಕಾಶ ನೀಡಿದ್ದರೂ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಅರ್ಜಿ ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆದರೆ, ಈ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ಬೇಸಾಯ ಮಾಡುತ್ತಿರುವ ಬಡರೈತರಿಗೆ ಅನ್ಯಾಯವಾಗಿದೆ. ಬಡರೈತರಿಗೆ ಭೂಮಿ ನೀಡುವ ಬದಲು ಶ್ರೀಮಂತರಿಗೆ, ಲ್ಯಾಂಡ್ ಡೆವಲಪರ್‌ಗಳಿಗೆ ಹಾಗೂ ಮಠಾಧೀಶರಿಗೆ ಸಾವಿರಾರು ಎಕರೆ ಭೂಮಿಯನ್ನು 18 ಕಿಮೀ ವ್ಯಾಪ್ತಿಯಲ್ಲಿ ನೀಡುತ್ತಾರೆ ಎಂದು ಆರೋಪ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News