ನಾಲ್ಕು ಶಾಸಕರ ಗೆಲುವಿಗೆ ರಮೇಶ್ ಜಾರಕಿಹೊಳಿ ಕಾರಣ: ಸಂಸದ ಪ್ರಕಾಶ್ ಹುಕ್ಕೇರಿ
Update: 2018-12-30 19:22 IST
ಬೆಳಗಾವಿ, ಡಿ.30: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 4 ಕಾಂಗ್ರೆಸ್ ಶಾಸಕರು ಆಯ್ಕೆಯಾಗಲು ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರೇ ಕಾರಣ ಎಂದು ಸಂಸದ ಪ್ರಕಾಶ ಹುಕ್ಕೇರಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಷಂಬಾ ಪಟ್ಟಣದ ಲೋಕಸಭಾ ಕ್ಷೇತ್ರದಲ್ಲಿ ಅನುದಾನ ಮಂಜೂರಾತಿ ಆದೇಶ ಪ್ರತಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನನಗೂ ವಿಧಾನಸಭೆ ಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವ ಆಸೆಯಿತ್ತು. ಆದರೆ, ಕಾರಣಾಂತರಗಳಿಂದ ಸ್ಪರ್ಧೆ ಮಾಡಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಸಂಸದನಾಗಿ ನನ್ನ ಅವಧಿಯಲ್ಲಿ 400 ಕೋಟಿಗಿಂತ ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಇದು ನನಗೆ ಸಂತಸವನ್ನು ನೀಡಿದೆ. ಕಾರ್ಯಕರ್ತರು ಬಯಸಿದರೆ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವೆ ಎಂದು ಅವರು ಹೇಳಿದರು.