‘ಮೇಲ್ತೆನೆ’ ಸಂಘಟನೆಗೆ ನೂತನ ಪದಾಧಿಕಾರಿಗಳ ಆಯ್ಕೆ
Update: 2018-12-31 17:55 IST
ಮಂಗಳೂರು, ಡಿ.31: ದೇರಳಕಟ್ಟೆಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸುತ್ತಿರುವ ಬ್ಯಾರಿ ಲೇಖಕರು ಮತ್ತು ಕಲಾವಿದರನ್ನು ಒಳಗೊಂಡ ‘ಮೇಲ್ತೆನೆ’ ಸಂಘಟನೆಯ ವಾರ್ಷಿಕ ಸಭೆಯು ರವಿವಾರ ಮಡಿಕೇರಿಯಲ್ಲಿ ಜರುಗಿತು.
ಅಧ್ಯಕ್ಷ ಬಶೀರ್ ಅಹ್ಮದ್ ಕಿನ್ಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್ ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು. ಸಂಘಟನೆಯ ವತಿಯಿಂದ 2019ರಲ್ಲಿ ನಡೆಸಲಾಗುವ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
2019ನೆ ಸಾಲಿನ ಗೌರವಾಧ್ಯಕ್ಷರಾಗಿ ಆಲಿಕುಂಞಿ ಪಾರೆ, ಅಧ್ಯಕ್ಷರಾಗಿ ಹಂಝ ಮಲಾರ್, ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರ್ ಅಹ್ಮದ್ ಸಾಮಣಿಗೆ, ಕೋಶಾಧಿಕಾರಿಯಾಗಿ ಇಸ್ಮಾಯೀಲ್ ಟಿ., ಉಪಾಧ್ಯಕ್ಷರಾಗಿ ಮುಹಮ್ಮದ್ ಬಾಷಾ ನಾಟೆಕಲ್, ಜೊತೆ ಕಾರ್ಯದರ್ಶಿಯಾಗಿ ಬಶೀರ್ ಕಲ್ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಶೀರ್ ಅಹ್ಮದ್ ಕಿನ್ಯ, ಇಸ್ಮತ್ ಪಜೀರ್, ನಿಯಾಝ್ ಪಿ., ರಫೀಕ್ ಪಾಣೇಲ, ನಿಝಾಮ್ ಪೊಟ್ಟೊಳಿಕೆ ಅವರನ್ನು ಆಯ್ಕೆ ಮಾಡಲಾಯಿತು.