×
Ad

ಮಣಿನಾಲ್ಕೂರು ಗ್ರಾಪಂ: ಉಚಿತ ನೇತ್ರ ತಪಾಸಣೆ-ಶಸ್ತ್ರಚಿಕಿತ್ಸಾ ಶಿಬಿರ

Update: 2018-12-31 18:52 IST

ಬಂಟ್ವಾಳ, ಡಿ. 31: ಬಂಟ್ವಾಳ ತಾಲೂಕು ಮಣಿನಾಲ್ಕೂರು ಗ್ರಾಮ ಪಂಚಾಯತ್ ವತಿಯಿಂದ ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಸೊಸೈಟಿ ಅಂಧತ್ವ ವಿಭಾಗ, ಡಾ. ಪಿ. ದಯಾನಂದ ಪೈ ಮತ್ತು ಡಾ. ಸತೀಶ್ ಪೈ ಸೆಂಚುರಿ ಗ್ರೂಪ್ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಮಣಿನಾಲ್ಕೂರು ಗ್ರಾಪಂ ಸಭಾಂಗಣದಲ್ಲಿ ರವಿವಾರ ಜರಗಿತು.

ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞೆ ಡಾ. ಕ್ರಿಸ್ ಡಿ ಸೋಜ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳ ಮಧ್ಯೆ ಬದುಕುತ್ತಿರುವ ಬಡ ಜನತೆಯ ಆರೋಗ್ಯ ಸೇವೆ ಒದಗಿಸುವ ಮೂಲಕ ಸಮಾಜದ ಒಳಿತಿಗೆ ಶ್ರಮಿಸುವುದು ಪುಣ್ಯ ಕಾರ್ಯವಾಗಿದೆ ಎಂದರು.

ಒತ್ತಡ, ಅಜಾಗರೂಕತೆಯಿಂದ ಕಣ್ಣಿನ ಆರೋಗ್ಯ ಹಾಳಾಗುತ್ತದೆ. ಇಂತಹ ಶಿಬಿರಗಳನ್ನು ಸದುಪಯೋಗಪಡಿಸಿಕೊಂಡು ಕಣ್ಣಿನ ಆರೋಗ್ಯದ ಬಗ್ಗೆ ಅರಿತು, ಸಂರಕ್ಷಿಸಿರಿ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ಗೀತಾ ಶ್ರೀಧರಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಿವಪ್ಪ ಪೂಜಾರಿ ಹಟದಡ್ಕ, ಧರಣೇಂದ್ರ ಜೈನ್, ಫಾರುಕ್, ಡೆನಿಸ್ ಮೊರಾಸ್, ಮಾವಿನಕಟ್ಟೆ ಸ.ಹಿ.ಪ್ರಾ.ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ಅಬ್ಬಾಸ್, ಶಾಲಾ ಮುಖ್ಯ ಶಿಕ್ಷಕಿ ಕಸ್ತೂರಿ, ಗ್ರಾಪಂ ಸಿಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ವಸಂತಿ ಸ್ವಾಗತಿಸಿದರು. ಪ್ರಸಾದ್ ನೇತ್ರಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ನಿಶ್ಚಿತ್ ಶೆಟ್ಟಿ ಪ್ರಸ್ತಾವಿಸಿದರು. ಗ್ರಾಪಂ ಸದಸ್ಯ ಆದಂ ಕುಂಞಿ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಅರ್ಹ ಫಲಾನುಭವಿಗಳಿಗೆ ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆಗೆ ವ್ಯವಸ್ಥೆಗೊಳಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News