ರಾಯಚೂರು ಧರ್ಮಲ್ ಪವರ್ ಸ್ಟೇಷನ್‌ನಲ್ಲಿ ಬೆಂಕಿ ಅವಘಡ

Update: 2019-01-01 12:51 GMT

ರಾಯಚೂರು, ಜ.1: ಥರ್ಮಲ್ ಪವರ್ ಸ್ಟೇಷನ್ ಘಟಕವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಶಕ್ತಿನಗರದಲ್ಲಿರುವ ಥರ್ಮಲ್ ಪವರ್ ಸ್ಟೇಷನ್‌ನ ಒಂದನೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ.

ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಒಂದನೆ ಘಟಕದ ವಿದ್ಯುತ್ ಪೂರೈಸುವ ಮಾರ್ಗದ ಟ್ರಾನ್ಸ್ ಫಾರ್ಮನಲ್ಲಿ ಬೆಂಕಿ ತಗುಲಿ ಟ್ರಾನ್ಸ್‌ಫಾರ್ಮ್ ಸುಟ್ಟಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಬೆಂಕಿ ಅವಘಡದಿಂದ ಕೆಲ ಗಂಟೆಗಳ ಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು, ವಿದ್ಯುತ್ ಇಲ್ಲದೆ, ಕತ್ತಲು ಆವರಿಸಿತ್ತು. ಇನ್ನು ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು. ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News