ಹೊನ್ನಾಳದ ಸರಕಾರಿ ಉರ್ದು ಶಾಲಾ ಶತಮಾನೋತ್ಸವ

Update: 2019-01-01 14:30 GMT

ಬ್ರಹ್ಮಾವರ, ಜ.1: ಹೊನ್ನಾಳದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಜ್ಞಾನ ವಸಂತ ಶೆಟ್ಟಿ, ಉಡುಪಿ ಜಲ್ಲಾ ವಕ್ಫ್ ಸಲಹಾ ಮಂಡಳಿ ಅಧ್ಯಕ್ಷ ಕೆ.ಪಿ.ಇಬ್ರಾಹಿಂ, ಜೆಡಿಎಸ್ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ್ ರಾವ್ ಮಾತನಾಡಿ ಶುಭಹಾರೈಸಿದರು. ಅಧ್ಯಕ್ಷತೆ ಯನ್ನು ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಿ ಶೆಡ್ತಿ ವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘ ಯುಎಇ ಘಟಕದ ಕಾರ್ಯದರ್ಶಿ ಫಿರೋಜ್ ಮಾತನಾಡಿ, ಹಳೆ ವಿದ್ಯಾರ್ಥಿ ಸಂಘ ಸದಾ ಈ ಶಾಲೆಯ ಬೆನ್ನೆಲುಬಾಗಿ ನಿಂತಿದೆ ಹಾಗೂ ಮುಂದಿನ ವರ್ಷದಿಂದ ವಿದ್ಯಾರ್ಥಿ ವೇತನ ಹಾಗೂ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಬಹುಮಾನದ ರೂಪದಲ್ಲಿ ನಗದು ನೀಡಲಾಗುವುದು ಎಂದು ಘೋಷಿಸಿದರು.

ಎಸ್‌ಡಿಎಂಸಿಯ ಮಾಜಿ ಅಧ್ಯಕ್ಷ ಸುಬಾನ್ ಎಚ್., ಖಲೀಲ್ ಕೆರಾಡಿ, ಮುಹಮ್ಮದ್ ಹನೀಫ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರೀಫುಲ್ಲಾ, ಖತೀಬ್ ಅಕ್ಬರ್ ಸಾಹೇಬ್, ಅಬ್ದುಲ್ ಖಾದಿರ್ ಸಾಹೇಬ್, ಗಣೇಶ್ ಶೆಟ್ಟಿ, ನಾಗರಾಜ್ ಶೆಟ್ಟಿ, ಇಂಬ್ರೆಜ್ ಸಾಹೇಬ್, ನಜೀರ್ ಸಾಹೇಬ್, ಎಸ್‌ಡಿಎಂಸಿ ಅಧ್ಯಕ್ಷೆ ಸದಫ್ ಶಬಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅಧ್ಯಾಪಕಿ ಮೆಹಬೂಬಿ ಫಣಿಬಂದ್ ಸ್ವಾಗತಿಸಿದರು. ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿ ಹಾಗೂ ಹಳೆ ವಿದ್ಯಾರ್ಥಿ ಗಳಿಂದ ಮನೋರಂಜನಾ ಕಾರ್ಯಕ್ರಮಗಳು ಜರಗಿದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News