ಮುಖ್ಯ ಮಾಹಿತಿ ಆಯುಕ್ತರಾಗಿ ಸುಧೀರ್ ಭಾರ್ಗವ್ ಪ್ರಮಾಣ

Update: 2019-01-01 15:07 GMT

ಹೊಸದಿಲ್ಲಿ, ಜ. 1: ಸುಧೀರ್ ಭಾರ್ಗವ್ ಅವರು ಕೇಂದ್ರ ಮಾಹಿತಿ ಆಯೋಗ (ಸಿಐಸಿ)ದ ಮುಖ್ಯ ಮಾಹಿತಿ ಆಯುಕ್ತರಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರ್ಗವ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದ್ದಾರೆ.

ಭಾರ್ಗವ ಅವರು ಸಿಐಸಿಯಲ್ಲಿ ಮಾಹಿತಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಾಜಿ ಐಎಫ್‌ಎಸ್ ಅಧಿಕಾರಿ ಯಶವರ್ಧನ್ ಕುಮಾರ್ ಸಿನ್ಹಾ, ಸಿಬಿಐಸಿಯ ಹಿಂದಿನ ಅಧ್ಯಕ್ಷೆ ವನಜ ಎನ್ ಸರ್ನಾ, ಮಾಜಿ ಐಎಎಸ್ ಅಧಿಕಾರಿ ನೀರಜ್ ಕುಮಾರ್ ಗುಪ್ತಾ ಹಾಗೂ ಹಿಂದಿನ ಕಾನೂನು ಕಾರ್ಯದರ್ಶಿ ಸುರೇಶ್ ಚಂದ್ರ ಇತ್ತೀಚೆಗೆ ಸಿಐಸಿಯ ಮಾಹಿತಿ ಆಯುಕ್ತರಾಗಿ ಆಯ್ಕೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News