×
Ad

ಜ.4: ಕಾರ್ಮಿಕರ ಅಖಿಲ ಭಾರತ ಮುಷ್ಕರಕ್ಕೆ ಬೆಂಬಲಿಸಿ ಮೆರವಣಿಗೆ

Update: 2019-01-02 20:08 IST

ಮಂಗಳೂರು, ಜ.2: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.8ಮತ್ತು 9ರಂದು ರಾಷ್ಟ್ರವ್ಯಾಪಿ ನಡೆಯುವ ಮುಷ್ಕರವನ್ನು ಬೆಂಬಲಿಸಿ ಮತ್ತು ಜಿಲ್ಲೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು, ಉದ್ಯೋಗ ಸೃಷ್ಟಿಸುವ ಉದ್ದಿಮೆಗಳ ಸ್ಥಾಪನೆಗೆ ಒತ್ತಾಯಿಸಿ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿಯು ಜ.4ರಂದು ಸಂಜೆ 6 ಗಂಟೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಿಂದ ಹಂಪನಕಟ್ಟೆಯವರೆಗೆ ಪಂಜಿನ ಮೆರವಣಿಗೆ ನಡೆಸಲಿದೆ ಎಂದು ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಕಾರ್ಯದರ್ಶಿ ಸಂತೋಷ್ ಬಜಾಲ್ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News