×
Ad

ಹನೂರು: ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

Update: 2019-01-02 20:12 IST

ಹನೂರು,ಜ.2: ಜಮೀನಿಗೆ ತೆರಳಿದ್ದ ವ್ಯಕ್ತಿಯೊಬ್ಬರು ಹೆಜ್ಜೇನು ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆ ತಾಲೂಕಿನ ಜಿ.ಕೆ ಹೊಸೂರಿನಲ್ಲಿ ಬುಧವಾರ ನಡೆದಿದೆ.

ಎಂದಿನಂತೆ ಜಮೀನಿಗೆ ತೆರಳಿದ್ದ ಬಸವಣ್ಣ (51) ರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಹೋಲಿಕ್ರಾಸ್ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News