ಶಬರಿಮಲೆ ವಿವಾದ: ಕೇರಳಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೇವೆ ಸ್ಥಗಿತ
ಬೆಂಗಳೂರು, ಜ.3: ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರು ಪ್ರವೇಶಿಸುವಂತಿಲ್ಲ ಎಂಬ 800 ವರ್ಷಗಳ ಸಂಪ್ರದಾಯವನ್ನು ಇಬ್ಬರು ಮಹಿಳೆಯರು ಮುರಿದ ಹಿನ್ನೆಲೆಯಲ್ಲಿ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಿಂದ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಇಬ್ಬರು ಮಹಿಳೆಯರು ದೇಗುಲ ಪ್ರವೇಶಿಸಿದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿರುವ ಹಲವು ಸಂಘಟನೆಗಳು ಬಂದ್‌ಗೆ ಕರೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕೇರಳ ರಾಜ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಈ ಕುರಿತಂತೆ ಕೆಎಸ್‌ಆರ್‌ಟಿಸಿ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಂಗಳೂರಿನಿಂದ ಪ್ರತಿನಿತ್ಯ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಮಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ 40 ಬಸ್‌ಗಳ ಸೇವೆ ಹಾಗೂ ಇತರೆ ಪ್ರದೇಶಗಳಿಂದ ತೆರಳುತ್ತಿದ್ದ 20 ಬಸ್‌ಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಇದರಿಂದ ಸಂಸ್ಥೆಗೆ ಸುಮಾರು 10 ಲಕ್ಷ ನಷ್ಟವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.