ಮೈಸೂರು: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ ಪ್ರತಿಭಟನೆ
ಮೈಸೂರು,ಜ.3: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶ ಮಾಡಿರುವುದರ ವಿರುದ್ಧ ಶ್ರೀ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಇಂದು ಗಾಂಧಿ ಚೌಕದಲ್ಲಿ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಪ್ರತಿಭಟನಾಕಾರರು ಮಾತನಾಡಿ, ಕೋಟ್ಯಂತರ ಅಯ್ಯಪ್ಪ ಭಕ್ತರಿಗೆ ಜ.2 ಕರಾಳ ದಿನ. ಕೇರಳದ ಕಮ್ಯುನಿಸ್ಟ್ ಸರ್ಕಾರ ಇಬ್ಬರು ನಾಸ್ತಿಕ ಮಹಿಳೆಯರನ್ನು ಪೊಲೀಸರ ಸಹಾಯದಿಂದ ಹಿಂಬಾಗಿಲಿನ ಮೂಲಕ ದೇವಾಲಯದ ಪ್ರವೇಶವನ್ನು ಮಾಡಿಸಿ ನೂರಾರು ವರ್ಷಗಳಿಂದ ಶಬರಿಮಲೆ ಕ್ಷೇತ್ರದಲ್ಲಿ ನಡೆದುಕೊಂಡು ಬಂದಿದ್ದ ಸಂಪ್ರದಾಯವನ್ನು, ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬಂದಿದ್ದ ಪದ್ಧತಿಯನ್ನು ನಾಶ ಮಾಡುವುದರ ಮೂಲಕ ಕೋಟ್ಯಾಂತರ ಆಸ್ತಿಕರಿಗೆ ವಿಶೇಷವಾಗಿ ಅಯ್ಯಪ್ಪ ಭಕ್ತರಿಗೆ ಆಘಾತ, ನೋವನ್ನುಂಟು ಮಾಡಿದೆ. ಕೇರಳ ರಾಜ್ಯದ ಕಮ್ಯುನಿಸ್ಟ್ ಮುಖ್ಯಮಂತ್ರಿ ಕೋಟ್ಯಂತರ ಅಯ್ಯಪ್ಪ ಭಕ್ತರ ನಂಬಿಕೆಯನ್ನುಅಪಮಾನಿಸಲು ಕ್ಷೇತ್ರದ ಪಾವಿತ್ರ್ಯತೆಯನ್ನು ಹಾಳುಗೆಡವಲು ಉದ್ದೇಶಪೂರ್ವಕವಾಗಿ ಕೆಲವು ಪೊಲೀಸ್ ಅಧಿಕಾರಿಗಳ ಮೂಲಕ ಇಬ್ಬರು ಮಹಿಳೆಯರನ್ನು ಪ್ರವೇಶ ಮಾಡಿಸಿದರು ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ಸಂಚಾಲಕ ಚೇತನ್ ಮಂಜುನಾಥ್, ಗಿರಿಧರ್, ಗೋಕುಲ್ ಗೋವರ್ಧನ್, ಸವಿತಾ ಪಡ್ಕೇ, ಸೇರಿದಂತೆ ಹಲವರು ಪಾಲ್ಗೊಂಡಿದ್ದರು.