ಕಾಟಿಪಳ್ಳ: ಮಿಸ್ಬಾ ಕಾಲೇಜಿನಲ್ಲಿ ಸಾಧಕರಿಗೆ ಸನ್ಮಾನ

Update: 2019-01-04 05:57 GMT

ಸುರತ್ಕಲ್, ಜ.4: ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರಿಂ ಸ್ತ್ರೀ ಸಬಲೀಕರಣ ಸಾಧ್ಯ ಎಂದು ಸಾರಾ ಗ್ರೂಪ್ ಆಫ್ ಕಂಪನಿಯ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಹೇಳಿದ್ದಾರೆ.

ಕಾಟಿಪಳ್ಳದ ಮಿಸ್ಬಾ ಮಹಿಳಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿತಗೊಂಡು ಅವರು ಮಾತನಾಡಿದರು. ನಮ್ಮ ಸಮಾಜದ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಿಸ್ಬಾ ಕಾಲೇಜಿನ ಕಾರ್ಯವನ್ನು ಅವರು ಶ್ಲಾಘಿಸಿದರು.

ಈ ಸಂದರ್ಭ ಕಳೆದ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಕಾಲೇಜಿನ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷ ಬಿ.ಎಂ.ಮುಮ್ತಾಝ್ ಅಲಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮಂಗಳೂರಿನ ಜ್ಯುವೆಲ್ಸ್ ಹೌಸ್‌ನ ವ್ಯವಸ್ಥಾಪಕ ನಿರ್ದೇಶಕ ಸಲೀಂ ಸೂಫಿಕಾನ್, ಟ್ರಸ್ಟಿ ಅಬ್ದುಲ್ ಹಕೀಂ ಫಾಲ್ಕನ್, ಕಾಲೇಜಿನ ಸಂಚಾಲಕ ಬಿ.ಎ.ನಝೀರ್, ಪ್ರಾಂಶುಪಾಲೆ ಝಾಹಿದಾ ಜಲೀಲ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ಉಪಪ್ರಾಂಶುಪಾಲೆ ಸನಾ ಹುಸೈನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News