ಲಾರಿ ಢಿಕ್ಕಿ: ಸ್ಕೂಟರ್‌ ಸವಾರ ಸಾವು

Update: 2019-01-04 13:15 GMT

ಬೆಂಗಳೂರು, ಜ.4: ಶರವೇಗವಾಗಿ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ದುರ್ಘಟನೆ ಪೀಣ್ಯದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ ಎನ್ನಲಾಗಿದೆ.

ಪೀಣ್ಯದ ಜೋಸೆಫ್(43) ಮೃತಪಟ್ಟವರು ಎಂದು ತಿಳಿದುಬಂದಿದೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಜೋಸೆಫ್ ಅವರು ಶುಕ್ರವಾರ ಮುಂಜಾನೆ 5:30ರ ವೇಳೆ ಪೀಣ್ಯದ ಎಫ್‌ಎಫ್‌ಐ ಫ್ಯಾಕ್ಟರಿ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದು ಜೋಸೆಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಈ ಸಂಬಂಧ ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News