×
Ad

ಪ್ರವಾಹ-ಬರ ಅಧ್ಯಯನ ಪ್ರವಾಸ: ಸಚಿವ ಸಂಪುಟ ಉಪ ಸಮಿತಿ ರಚನೆ

Update: 2019-01-04 22:33 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ. 4: ರಾಜ್ಯದ ಪ್ರವಾಹ ಹಾಗೂ ಬರ ಪೀಡಿತ ಪ್ರದೇಶಗಳ ಅಧ್ಯಯನ, ಪ್ರವಾಹ ಪರಿಹಾರ ಹಾಗೂ ಬರ ನಿರ್ವಹಣೆ ಪ್ರಗತಿ ಪರಿಶೀಲನೆಗೆ ಸಚಿವರ ಅಧ್ಯಕ್ಷತೆಯಲ್ಲಿ ಕಂದಾಯ ವಿಭಾಗವಾರು ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ.

ಬೆಳಗಾವಿ ವಿಭಾಗ-ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯ ಸಂಪುಟ ಉಪ ಸಮಿತಿಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ಝಮೀರ್ ಅಹ್ಮದ್ ಖಾನ್, ಎಂ.ಸಿ.ಮನಗೂಳಿ, ಸಿ.ಎಸ್.ಶಿವಳ್ಳಿ, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪೂರ್ ಇದ್ದಾರೆ.

ಕಲಬುರ್ಗಿ ವಿಭಾಗ: ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಅಧ್ಯಕ್ಷತೆಯ ಉಪ ಸಮಿತಿಯಲ್ಲಿ ಪ್ರಿಯಾಂಕ್ ಖರ್ಗೆ, ರಾಜಶೇಖರ್ ಪಾಟೀಲ್, ಪರಮೇಶ್ವರ್ ನಾಯ್ಕಿ, ವೆಂಕಟರಾವ್ ನಾಡಗೌಡ, ರಹೀಂ ಖಾನ್, ಇ.ತುಕರಾಂ ಅವರನ್ನು ನಿಯೋಜನೆ ಮಾಡಲಾಗಿದೆ.

ಬೆಂಗಳೂರು ವಿಭಾಗ: ಕೃಷಿ ಸಚಿವ ಶಿವಶಂಕರ ರೆಡ್ಡಿ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿಯಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್, ವೆಂಕಟರಮಣಪ್ಪ, ಎಸ್.ಆರ್. ಶ್ರೀನಿವಾಸ್, ಡಿ.ಸಿ.ತಮ್ಮಣ್ಣ ಹಾಗೂ ಎಂಟಿಬಿ ನಾಗರಾಜ್ ಅವರು ಇದ್ದಾರೆ.

ಮೈಸೂರು ವಿಭಾಗ: ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯ ಉಪ ಸಮಿತಿಯಲ್ಲಿ ಸಚಿವರಾದ ಎಚ್.ಡಿ.ರೇವಣ್ಣ, ಕೆ.ಜೆ.ಜಾರ್ಜ್, ಯು.ಟಿ. ಖಾದರ್, ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಜಯಮಾಲಾ, ಸಿ.ಪುಟ್ಟರಂಗಶೆಟ್ಟಿ ಇದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News