ಜ. 5ರಂದು ಮೆಲ್ಕಾರ್ ಮಹಿಳಾ ಕಾಲೇಜಿನ ದಶಮಾನೋತ್ಸವ ಸಮಾರೋಪ
ಬಂಟ್ವಾಳ, ಜ. 4: ಮಂಗಳೂರು ಎಜುಕೇಶನ್ ಎನ್‍ಹ್ಯಾನ್ಸ್ ಮೆಂಟ್ ಟ್ರಸ್ಟ್ ನಡಿ ಸಜೀಪ ಮುನ್ನೂರಿನ ಮಾರ್ನಬೈಲ್‍ನಲ್ಲಿ ಕಾರ್ಯಾಚರಿಸುತ್ತಿರುವ "ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜಿ"ನ ದಶಮಾನೋತ್ಸವದ ಸಮಾರೋಪ ಸಮಾರಂಭ ಜ. 5ರಂದು ಕಾಲೇಜಿನ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ 9.30ಕ್ಕೆ ದೇರಳಕಟ್ಟೆ ಯೆನೆಪೊಯ ವಿಶ್ವವಿದ್ಯಾಲಯದ ಕುಲಪತಿ ವೈ. ಅಬ್ದುಲ್ಲಾ ಕುಂಞಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮುಖ್ಯ ಅಥಿತಿಗಳಾಗಿ, "ದಶಕದಿರು" ಹತ್ತರ ಹೊತ್ತಗೆಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಬಿಡುಗಡೆಗೊಳಿಸುವರು.
ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿಯ ಅಧ್ಯಕ್ಷ ಯು.ಕೆ.ಮೋನು, ಅರಕೆರೆ ಮಿತ್ರ ಅಕಾಡೆಮಿಯ ಅಧ್ಯಕ್ಷ ಅಕ್ಬಾಲ್ ಅಹ್ಮದ್, ಬೆಂಗಳೂರು ಕಾರ್ಮೆಲ್ ಸ್ಕೂಲಿನ ಅಧ್ಯಕ್ಷ ಫಿರೋಝ್ ಅಹ್ಮದ್ ಗೌರವ ಅತಿಥಿಗಳಾಗಿ ಭಾಗವಹಿಸುವರು.
ಮಂಗಳೂರು ಎಜುಕೇಶನ್ ಎನ್‍ಹ್ಯಾನ್ಸ್ ಮೆಂಟ್ ಟ್ರಸ್ಟ್ ನ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಅಧ್ಯಕ್ಷತೆ ವಹಿಸುವರು ಎಂದು ಮಂಗಳೂರು ಎಜುಕೇಶನ್ ಎನ್‍ಹ್ಯಾನ್ಸ್ ಮೆಂಟ್ ಟ್ರಸ್ಟ್ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.