×
Ad

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲಿಯೇ ಫಲಿತಾಂಶ ಪ್ರಕಟ

Update: 2019-01-04 23:29 IST

ಬೆಂಗಳೂರು, ಜ.4: ಪ್ರಸಕ್ತ ಸಾಲಿನಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನ ಬಿ.ಟೆಕ್‌ನ ಎಲ್ಲ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್ ಮತ್ತು ಬಿ.ಆರ್ಕ್ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಒಂದು ಗಂಟೆಯೊಳಗೆ ವಿಶ್ವವಿದ್ಯಾಲಯವು ಪ್ರಕಟಿಸಿದೆ. 

ಈ ಕಾರ್ಯ ಸಾಧನೆಯನ್ನು ಮುಖ್ಯ ಅಭಿರಕ್ಷಕರು, ಉಪ ಅಭಿರಕ್ಷಕರು ಮತ್ತು ಪರೀಕ್ಷಾ ಮಂಡಳಿಯ ಎಲ್ಲಾ ಸದಸ್ಯರ ಸಹಕಾರ ಮತ್ತು ಸಮನ್ವಯದಿಂದ ಸಾಧಿಸಲು ಸಾಧ್ಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವಿಶ್ವವಿದ್ಯಾಲಯದ ಅಧಿಕತ ವೈಬ್‌ಸೈಟ್ www.bangaloeuniversity.ac.in ನಲ್ಲಿ ವೀಕ್ಷಿಸಬಹುದು ಎಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News