ಬಂಟ್ವಾಳ: ಅಂಗಡಿಗೆ ಬೆಂಕಿ; ಅಪಾರ ನಷ್ಟ
ಬಂಟ್ವಾಳ, ಜ. 4: ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲಿ ಸಾವಿರಾರು ರೂ. ನಷ್ಟ ಸಂಭವಿಸಿದ ಘಟನೆ ಬಡ್ಡಕಟ್ಟೆ ರಸ್ತೆಯ ಭಾಮಿ ಜಂಕ್ಷನ್ ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಬಂಟ್ವಾಳ ಭಾಮಿ ಜಂಕ್ಷನ್ ಬಳಿಯ ಖಾಸಗಿ ಕಟ್ಟಡವೊಂದರಲ್ಲಿ ಕಾರ್ಯಚರಿಸುತ್ತಿರುವ ಅರಳ ಮಾದವ ಪ್ರಭು ಎಂಬವರ ಸುಧಾ ಕೋಲ್ಡ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದೆ. ಪರಿಣಾಮ ಅಂಗಡಿಯೊಳಗಿದ್ದ ಸಾವಿರಾರು ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿ ನಷ್ಟ ಸಂಭವಿಸಿದೆ.
ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರಬಹುದು ಎಂದು ಶಂಕಿಸಲಾಗಿದೆ. ಬಂಟ್ವಾಳ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು.
ಬಂಟ್ವಾಳ ನಗರ ಠಾಣಾ ಎಸ್ಸೈ ಚಂದ್ರಶೇಖರ್, ಅಪರಾಧ ವಿಭಾಗದ ಎಸ್ಸೈ ಹರೀಶ್ ಸ್ಥಳಗಾಮಿಸಿ ಪರಿಶೀಲನೆ ನಡೆಸಿದರು.
ಸ್ಥಳೀಯ ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ಸಹಿತ ಸಾರ್ವಜನಿಕರು ಬೆಂಕಿ ನಂದಿಸಲು ಸಹಕರಿಸಿದರು.