×
Ad

ಹನೂರು: ಗ್ರಾಮ ಪಂಚಾಯತ್ ಉಪಚುನಾವಣೆ; ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಜಯ

Update: 2019-01-04 23:47 IST

ಹನೂರು,ಜ.4: ಪಿ.ಜಿ. ಪಾಳ್ಯ ಗ್ರಾಮ ಪಂಚಾಯತ್ ನ 3 ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವಸ್ವಾಮಿ ಜಯಗಳಿಸಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಪಿ.ಜಿ.ಪಾಳ್ಯ ಗ್ರಾಮ ಪಂ. ಸದಸ್ಯರಾಗಿ ಆಯ್ಕೆಯಾಗಿದ್ದ ನಾಗೇಶ್ ಎಂಬವರು ತಮ್ಮ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು. ಇವರಿಂದ ತೆರವಾದ ಸ್ಥಾನಕ್ಕೆ ಡಿ.2ರಂದು ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತರಾಗಿ ಚಂದ್ರ ಶೇಖರ ಆರಾಧ್ಯ, ಜೆಡಿಎಸ್ ಬೆಂಬಲಿತರಾಗಿ ಬಸವಣ್ಣ, ಬಿಜೆಪಿ ಬೆಂಬಲಿತರಾಗಿ ಶಿವಸ್ವಾಮಿ ಎಂಬವರು ಸ್ಪರ್ಧಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ್ ಆರಾಧ್ಯ 216 ಮತಗಳನ್ನು ಪಡೆದುಕೊಂಡರೆ, 222 ಮತಗಳನ್ನು ಪಡೆದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವಸ್ವಾಮಿ 6 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ.

ವಿಜಯೋತ್ಸವ: 3ನೇ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಿವಸ್ವಾಮಿಯವರನ್ನು ಬೆಂಬಲಿಗರು ಮೆರವಣೆಗೆ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News