ಎಸ್ಸೆಸ್ಸೆಫ್ ಮುಡಿಪು ಡಿವಿಷನ್: ನೂತನ ಪದಾಧಿಕಾರಿಗಳ ಆಯ್ಕೆ

Update: 2019-01-05 05:07 GMT

ಕೋಣಾಜೆ, ಜ. 5: ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕಳೆದ ಸಾಲಿನ ಸಕ್ರಿಯ ಕಾರ್ಯಾಚರಣೆಯಿಂದ 11 ಸೆಕ್ಟರ್ ಹಾಗೂ 110 ಯೂನಿಟ್ ಗಳನ್ನು ಹೊಂದಿದ್ದು, ಕಾರ್ಯಚರಣೆಯ ಸರಳತೆಗೆ ಬೇಕಾಗಿ ಉಳ್ಳಾಲ ಡಿವಿಷನನ್ನು ವಿಭಜಿಸಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಹಾಗೂ ಎಸ್ಸೆಸ್ಸೆಫ್ ಮುಡಿಪು ಡಿವಿಷನನ್ನು ಅಸ್ತಿತ್ವಕ್ಕೆ ತರಲಾಯಿತು.

ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ತರಗತಿಯನ್ನು ನಡೆಸಿದರು.

ಚುನಾವಣಾ ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಎಸ್ಸೆಸ್ಸೆಫ್ ಜಿಲ್ಲಾ  ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ ಹಾಗೂ ಜಿಲ್ಲಾ ಸದಸ್ಯ ರಶೀದ್ ಹಾಜಿ ವಗ್ಗ ಪ್ರಾಸ್ತಾವಿಕವಾಗಿ ಮಾತನಾಡಿದರು.

ವರದಿ ಹಾಗೂ ಲೆಕ್ಕ ಪತ್ರ ಮಂಡನೆಯ ನಂತರ ಹೊಸ ಡಿವಿಷನ್ ಆದ ಮುಡಿಪು ಡಿವಿಷನ್ ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ತೌಸೀಫ್ ಸಅದಿ ಹರೇಕಳ, ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ, ಕೋಶಾಧಿಕಾರಿ ಶರೀಫ್ ಮುಡಿಪು, ಕ್ಯಾಂಪಸ್ ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳ, ಉಪಾಧ್ಯಕ್ಷರುಗಳಾಗಿ ಇಬ್ರಾಹಿಂ ಅಹ್ಸನಿ ಮಂಜನಾಡಿ, ಸಿದ್ದೀಕ್ ಸಖಾಫಿ ಕಾಯಾರ್, ಕಾರ್ಯದರ್ಶಿಗಳಾಗಿ ನೌಫಲ್ ಕೊಣಾಜೆ, ಮೊಯಿದಿನ್ ಮೋರ್ಲ ಹಾಗೂ ಇನ್ನಿತರ 13 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ನಾಯಕರಾದ ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ, ಡಿವಿಷನ್ ನಾಯಕರಾದ ಫಾರೂಕ್ ಸಖಾಫಿ ಮದನಿ ನಗರ, ಆಸಿಫ್ ಸಖಾಫಿ ಮುಡಿಪು ಮಜೀದ್ ಫರೀದ್ ನಗರ ಮೊದಲಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ಸ್ವಾಗತಿಸಿದರು. ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News