×
Ad

ನಿಗಮ-ಮಂಡಳಿಗಳಿಗೆ ಅನುಮೋದನೆ ನೀಡದ ಮುಖ್ಯಮಂತ್ರಿ: ಕಾಂಗ್ರೆಸ್ ಮುಖಂಡರ ಅಸಮಾಧಾನ

Update: 2019-01-05 19:38 IST

ಬೆಂಗಳೂರು, ಜ.5: ರಾಜ್ಯದ 19 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಶಾಸಕರನ್ನು ನೇಮಕ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಮಾಡಿರುವ ಶಿಫಾರಸ್ಸಿಗೆ ಅನುಮೋದನೆ ನೀಡದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಗೆ, ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆ ವಿದೇಶಕ್ಕೆ ತೆರಳಿದ್ದ ಮುಖ್ಯಮಂತ್ರಿ, ಸ್ವದೇಶಕ್ಕೆ ವಾಪಸ್ಸಾಗಿದ್ದರೂ ನಿಗಮ-ಮಂಡಳಿಗಳಿಗೆ ಅನುಮೋದನೆ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿರುವುದರಿಂದ ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಶಿಫಾರಸ್ಸು ಮಾಡಿರುವ 19 ನಿಗಮ-ಮಂಡಳಿಗಳಲ್ಲಿ 7ಕ್ಕೆ ಮಾತ್ರ ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ಇನ್ನುಳಿದ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ತಮ್ಮ ಪಕ್ಷಕ್ಕೆ ಬಿಟ್ಟುಕೊಡುವಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

ನಮ್ಮ ಗಮನಕ್ಕೆ ತಾರದೆ ನಿಗಮ-ಮಂಡಳಿಗಳಿಗೆ ಶಿಫಾರಸ್ಸು ಮಾಡಲಾಗಿದೆ. ಹಲವು ನಿಗಮ, ಮಂಡಳಿಗಳು ತಮ್ಮ ಪಕ್ಷದ ಸಚಿವರು ನಿರ್ವಹಿಸುತ್ತಿರುವ ಇಲಾಖೆಯ ವ್ಯಾಪ್ತಿಗೊಳಪಡುತ್ತವೆ ಎಂಬ ವಾದವನ್ನು ಜೆಡಿಎಸ್ ಮುಖಂಡರು, ಕಾಂಗ್ರೆಸ್ ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನಿಗಮ-ಮಂಡಳಿಗಳ ಪಟ್ಟಿಗೆ ಅನುಮೋದನೆ ನೀಡಲು ಮುಖ್ಯಮಂತ್ರಿ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News