ಮರಳು ಲಭ್ಯತೆಗಾಗಿ ಕಂಟ್ರೋಲ್ ರೂಮ್
Update: 2019-01-05 20:09 IST
ಉಡುಪಿ, ಜ.5: 2018-19ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ಬ್ರಹ್ಮಾವರ ಹಾಗೂ ಉಡುಪಿ ತಾಲೂಕು ವ್ಯಾಪ್ತಿಯ ಮರಳು ದಿಬ್ಬಗಳನ್ನು ತೆರವುಗೊಳಿಸಲು ಮರಳು ಪರವಾನಿಗೆಯನ್ನು ಈಗಾಗಲೇ ನೀಡಿದ್ದು, ಮರಳು ದಿಬ್ಬಗಳನ್ನು ತೆರವುಗೊಳಿಸಿ ಜಿಲ್ಲೆಯೊಳಗೆ ಸ್ಥಳೀಯ ಬಳಕೆಗೆ ವಿತರಿಸಲಾಗುತ್ತಿದೆ.
ಸಾರ್ವಜನಿಕರಿಗೆ ಮರಳು ದೊರೆಯುವಂತೆ ಮಾಡಲು ಜಿಲ್ಲಾಡಳಿತವು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಮರಳು ಪಡೆಯಬೇಕಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್) ದೂರವಾಣಿ ಸಂ.:0820-2574802ಗೆ ಕರೆಮಾಡಿ ಮರಳಿನ ಲಭ್ಯ ತೆ ಬಗ್ಗೆ ಮಾಹಿತಿ ಪಡೆಯುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ/ ಅನುಷ್ಠಾನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.