ಜ.7ರಂದು ದಕ್ಷಿಣ ವಲಯ ರಾಜ್ಯಗಳ ಜ್ಞಾನ ಮೇಳ ಉದ್ಘಾಟನೆ
ಬೆಂಗಳೂರು, ಜ.5: ಪ್ರಸ್ತುತ ಸಾಲಿನ ದಕ್ಷಿಣ ವಲಯ ರಾಜ್ಯಗಳ ಜ್ಞಾನ ಮೇಳವನ್ನು ಜ.7 ರಿಂದ 11 ರವರೆಗೆ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಇಂಡಿಯನ್ ಪ್ರೌಢ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮ್ಮೇಳನದ ಉದ್ಘಾಟನೆಯನ್ನು ಜ.7 ರ ಬೆಳಗ್ಗೆ 10-30 ಗಂಟೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ. ಕೇಂದ್ರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ, ಕೇಂದ್ರದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಜ್ಞಾನ ಮತ್ತು ವಸ್ತು ಪ್ರದರ್ಶನದ ಉದ್ಫಾಟನೆಯನ್ನು ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರು ಉದ್ಫಾಟಿಸಲಿದ್ದಾರೆ. ಸಮಾರಂಭ ಅಧ್ಯಕ್ಷತೆಯನ್ನು ಶಾಸಕ ಎನ್.ಎ. ಹಾರಿಸ್ ಅವರು ವಹಿಸಲಿದ್ದಾರೆ. ಸಮ್ಮೇಳನದಲ್ಲಿ ವಿಧಾನಸಭಾ ಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್, ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ.