×
Ad

ಶಾಲೆಗಳಲ್ಲಿ ಶುಲ್ಕ ವಿವರ ಫಲಕ ಪ್ರದರ್ಶನ ಕಡ್ಡಾಯ: ಹೈಕೋರ್ಟ್ ಆದೇಶ

Update: 2019-01-05 21:42 IST

ಬೆಂಗಳೂರು, ಜ.5: ಶಿಕ್ಷಣ ಸಂಸ್ಥೆಗಳು ಅದರಲ್ಲೂ ಮುಖ್ಯವಾಗಿ ಖಾಸಗಿ ಶಾಲೆಗಳು ಶುಲ್ಕ ವಿವರಗಳ ಫಲಕವನ್ನು ಪ್ರದರ್ಶಿಸಬೇಕೆಂದು ಹೊರಡಿಸಿರುವ ಸುತ್ತೋಲೆಯನ್ನು ಜಾರಿಗೆ ತಾರದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರಾಜ್ಯ ಹೈಕೋರ್ಟ್ ಮುಂದಿನ ವಿಚಾರಣೆಯ ದಿನಾಂಕದೊಳಗೆ ಅಗತ್ಯ ಆದೇಶವನ್ನು ಪಾಲಿಸದಿದ್ದಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಆದೇಶ ಹೊರಡಿಸಿದೆ.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದ ಸರಕಾರಿ ಪರ ವಕೀಲ, 2015ರ ಎಪ್ರಿಲ್ 13ರಂದು ಹೊರಡಿಸಿದ ಸುತ್ತೋಲೆಯನ್ನು 2,129 ಶಾಲೆಗಳು ಇನ್ನು ಕೂಡ ಜಾರಿಗೆ ತಂದಿಲ್ಲ. ಇಲಾಖೆ ತನ್ನ ಸುತ್ತೋಲೆಯನ್ನೇ ಜಾರಿಗೆ ತರುವಲ್ಲಿ ಏಕೆ ವಿಫಲವಾಗಿದೆ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ಮುಂದಿನ ವಿಚಾರಣೆಯ ದಿನಾಂಕದ ವೇಳೆ ಎಲ್ಲ ಜಿಲ್ಲೆಗಳಲ್ಲಿ ಜಾರಿಗೆ ಬಾರದಿದ್ದರೆ ಶಿಕ್ಷಣ ಇಲಾಖೆ ಆಯುಕ್ತರು ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಿ ಕಾರಣ ನೀಡಬೇಕು ಎಂದು ಹೇಳಿ ಮುಂದಿನ ವಿಚಾರಣೆಯನ್ನು ಜನವರಿ 23ಕ್ಕೆ ಮುಂದೂಡಿದರು.

ಎಲ್ಲ ಶಾಲೆಗಳು ಸುತ್ತೋಲೆಯನ್ನು ಜಾರಿಗೆ ತರಬೇಕೆಂದು ಪಿಐಎಲ್ ಸಲ್ಲಿಕೆಯಾಗಿತ್ತು. 2015-16ರಿಂದ ರಾಜ್ಯದ ಎಲ್ಲ ಖಾಸಗಿ ಶಾಲೆಗಳು ತಮ್ಮ ಶಾಲೆಯಲ್ಲಿನ ಶುಲ್ಕ ವಿವರ, ಸೀಟುಗಳ ಲಭ್ಯತೆಗಳನ್ನು ಪ್ರದರ್ಶಿಸಬೇಕೆಂದು ಆದೇಶ ನೀಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News