ಲೋಕಸಭಾ ಚುನಾವಣೆ: ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಪ್ರಕಾಶ್ ರೈ

Update: 2019-01-05 16:30 GMT

ಬೆಂಗಳೂರು, ಜ.5: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದ ನಟ, ನಿರ್ದೇಶಕ, ಪ್ರಕಾಶ್ ರೈ ಇದೀಗ ತಮ್ಮ ಕ್ಷೇತ್ರದ ಬಗ್ಗೆ ಘೋಷಿಸಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ತಾನು ಸ್ಪರ್ಧಿಸುವುದಾಗಿ ಪ್ರಕಾಶ್ ರೈ ಟ್ವಿಟರ್ ನಲ್ಲಿ ಘೋಷಿಸಿದ್ದಾರೆ.

“ನನ್ನ ಹೊಸ ಪಯಣಕ್ಕೆ ಪ್ರೋತ್ಸಾಹಿಸಿದ್ದಕ್ಕಾಗಿ ಧನ್ಯವಾದಗಳು.. ನಾನು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ” ಎಂದವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News