ಐಟಿ ದಾಳಿಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ಕೊಡುವುದು ಸರಿಯಲ್ಲ: ಕುಮಾರಸ್ವಾಮಿ

Update: 2019-01-05 17:10 GMT

ಹುಬ್ಬಳ್ಳಿ,ಜ.05: ಸಿನಿಮಾ ನಟರ ಮನೆಯ ಮೇಲೆ ದಾಳಿ ಮಾಡಿದ್ದು ಐಟಿ. ಇದು ಕೇಂದ್ರದ ಇಲಾಖೆ. ಅವರು ಒಂದು ದಾಳಿ ಮಾಡಲು ಹಲವಾರು ತಿಂಗಳಿಂದ ತಯಾರಿ ಮಾಡಿಕೊಂಡಿರುತ್ತಾರೆ. ಇದಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ಕೊಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳ ಬಳಿ ಮಾಹಿತಿ ಸರಿಯಾಗಿ ಇದ್ದರೆ ದಾಳಿ ಮಾಡುತ್ತಾರೆ ಎಂದರು. ರಾಜ್ಯ ಸರ್ಕಾರದಿಂದ ಪೆಟ್ರೋಲ್ ಬೆಲೆ ಏರಿಕೆ ವಿಚಾರವನ್ನು ಸಮರ್ಥನೆ ಮಾಡಿಕೊಂಡ ಸಿಎಂ, ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಇದ್ದಾಗಲೂ ನಾನು ಬೆಲೆ ಕಡಿಮೆ ಮಾಡಿದ್ದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಮಾಡಿದರೂ ಪಕ್ಕದ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಬೆಲೆ ಕಡಿಮೆ ಇರಲಿದೆ ಎಂದು ಸಮರ್ಥಿಸಿಕೊಂಡರು.

ವಿಚಾರಣೆ ಪ್ರಗತಿಯಲ್ಲಿ

ವಿಧಾನಸಭೆ ವೆಸ್ಟ್ ಗೇಟ್ ಬಳಿ ಹಣ ಜಪ್ತಿ ವಿಚಾರದಲ್ಲಿದೆ. ಈಗಾಗಲೆ ತನಿಖೆ ಆರಂಭವಾಗಿದೆ. ಪೊಲೀಸರು ಸ್ವತಂತ್ರ ತನಿಖೆ ಮಾಡಲಿ. ತನಿಖಾ ವರದಿ ಬಂದ ಮೇಲೆ ಕ್ರಮದ ಬಗ್ಗೆ ವಿಚಾರ ಮಾಡುತ್ತೇವೆ. ನಾನು ಯಾವುದೇ ಕಾರಣಕ್ಕೂ ಈ ರೀತಿಯ ವಿಚಾರಕ್ಕೆ ಪ್ರಭಾವ ಬೀರುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಚಂಪಾ ಅವರು ಹೇಳಲಿ, ಅವರ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಾರೆ ಎಂದು ಅವರು ಜನರ ಮಂದೆ ತೆರದಿಡಲಿ. ಭಾಷೆ ಉಳಿಸಿಕೊಳ್ಳಲು ನಾನು ಸಿದ್ದನಿದ್ದೇನೆ. ಸಾಹಿತ್ಯ ಸಮ್ಮೇಳನದಲ್ಲಿ ಈ ಕುರಿತು ಠರಾವು ಆಗಲಿ ಎಂದರು. ಪತ್ರಿಕಾಗೋಷ್ಟಿಯಲ್ಲಿ ಮಾಜಿ ಸಚಿವ ಬಸವರಾಜ ಹೊರಟ್ಟಿ, ಶಾಸಕ ಪ್ರಸಾದ ಅಬ್ಬಯ್ಯ, ಮುಖಂಡರಾದ ರಾಜಣ್ಣ ಕೊರವಿ ಗುರುರಾಜ ಹುಣಸಿಮರದ ದೇವರಾಜ ಕಂಬಳಿ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News