×
Ad

ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ; ಸೊತ್ತು ವಶ

Update: 2019-01-05 23:04 IST

ಮಂಗಳೂರು, ಜ.5: ಸುರತ್ಕಲ್‌ನ  ಎನ್‌ಎಂಪಿಟಿ ಕಾಲನಿಯ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯೋರ್ವನನ್ನು ಪೊಲೀಸರು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ನಿವಾಸಿ ಅಬೂಬಕರ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ಕಳವುಗೈದ ಒಡವೆಗಳ ಪೈಕಿ ಒಟ್ಟು 121 ಗ್ರಾಂ ತೂಕದ ಸುಮಾರು 3,50,000 ರೂ. ಮೌಲ್ಯದ ಒಡವೆಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಯ ಪತ್ತೆಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಯು 2017ನೇ ಸಾಲಿನಿಂದ ಮೂಡುಬಿದಿರೆ, ಬಜ್ಪೆ, ವೇಣೂರು, ಮುಲ್ಕಿ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕೃತ್ಯವೆಸಗಿರುವ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News