ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಬಿಬಿಎಂಪಿ ಕಾಲೇಜಿನ ವಿದ್ಯಾರ್ಥಿನಿಗೆ ಬಹುಮಾನ
Update: 2019-01-05 23:11 IST
ಬೆಂಗಳೂರು, ಜ. 5: ಅಂತರ್ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಚಾಮರಾಜಪೇಟೆ ಬಿಬಿಎಂಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ 9ನೇ ಸ್ಥಾನ ಪಡೆದಿದ್ದಾರೆ.
ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ಮೋನಿಷಾ ಎಚ್ ಹಾಗು ಚಂದನ್ ಆರ್ ಅವರು ವನಿತಾ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ 17ನೇ ರಾಜ್ಯ ಮಟ್ಟದ ಅಂತರ್ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
55 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ "ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಭವಿಷ್ಯವನ್ನು ನಾಶ ಮಾಡುತ್ತವೆ" ಎಂಬುದನ್ನು ವಿರೋಧಿಸಿ ಮಾತನಾಡಿದ ಮೋನಿಷಾ 9ನೇ ಸ್ಥಾನ ಪಡೆದಿದ್ದಾರೆ.