ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜ್ಯ ಪ್ರವಾಸ ಮುಂದೂಡಿಕೆ

Update: 2019-01-06 13:58 GMT

ಬೆಂಗಳೂರು, ಜ.6: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜ.9ರಂದು ಕೈಗೊಳ್ಳಬೇಕಿದ್ದ ರಾಜ್ಯ ಪ್ರವಾಸವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಸಂಸತ್ ಅಧಿವೇಶನದ ಅವಧಿಯನ್ನು ವಿಸ್ತರಿಸಲಾಗಿದ್ದು, ಅಮಿತ್ ಶಾ ಉಪಸ್ಥಿತಿ ಅವಶ್ಯವಾಗಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News