ವಿಧಾನಸೌಧದಲ್ಲಿ ಅಕ್ರಮ ಹಣ ಪತ್ತೆ; ಸೂಕ್ತ ತನಿಖೆಯಾಗಲಿ: ಬಿ.ಎಸ್.ಯಡಿಯೂರಪ್ಪ

Update: 2019-01-06 14:25 GMT

ಧಾರವಾಡ, ಜ. 6: ವಿಧಾನಸೌಧದಲ್ಲಿ 26 ಲಕ್ಷ ರೂ. ಹಣ ಅಕ್ರುವಾಗಿ ಸಿಕ್ಕಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

ನಗರದಲ್ಲಿ ನಡೆಯುತ್ತಿರುವ  84ನೆಕನ್ನಡ ಸಾಹಿತ್ಯ ಸಮ್ಮೇಳನದ ಏರ್ಪಡಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿನುಡಿದಂತೆ ನಡೆದಿಲ್ಲ. ರಾಜ್ಯದಲ್ಲಿ ತುಘಲಕ್ ಆಡಳಿತ ನಡೆಸುತ್ತಿದ್ದಾರೆ.ಜನಬರಗಾಲದಿಂದ ತತ್ತರಿಸುತ್ತಿದ್ದರೂ ಮುಖ್ಯಮಂತ್ರಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಇದರಿಂದ ಜನ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಚಿತ್ರರಂಗದ ನಟರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಗೆ ಕೇಂದ್ರ ಸರಕಾರವನ್ನು ಎಳೆದು ತರಬಾರದು. ಐಟಿ ದಾಳಿಗೆ ಒಳಗಾದ ಎಲ್ಲ ನಟರು ಅಧಿಕಾರಿಗಳಿಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡವೆಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News