×
Ad

ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜ ಸೇರಿ ಎಂಟು ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕ

Update: 2019-01-06 21:49 IST

ಬೆಂಗಳೂರು, ಜ. 6: ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜ, ಕೆ.ಗೋವಿಂದರಾಜ್ ಹಾಗೂ ಶಾಸಕರಾದ ಅಂಜಲಿ ನಿಂಬಾಳ್ಕರ್, ಮಹಂತೇಶ್ ಕೌಜಲಗಿ, ರೂಪಾ ಶಶಿಧರ್, ರಾಘವೇಂದ್ರ ಹಿಟ್ನಾಳ್, ಡಿ.ಎಸ್. ಹೊಲಗೇರಿ ಅವರನ್ನು ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

ಎಂಟು ಮಂದಿ ಸಂಸದೀಯ ಕಾರ್ಯದರ್ಶಿಗಳಿಗೂ ರಾಜ್ಯ ಸಂಪುಟ ಸಚಿವ ಸ್ಥಾನಮಾನದೊಂದಿಗೆ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News