ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ: ಗೃಹ ಸಚಿವ ಎಂ.ಬಿ.ಪಾಟೀಲ್

Update: 2019-01-07 13:17 GMT

ಬೆಂಗಳೂರು, ಜ.7: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ನಾಳೆ(ಜ.8) ‘ಭಾರತ ಬಂದ್’ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. 

ಭಾರತ ಬಂದ್ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ರಾಜ್ಯ ಪೋಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರೊಂದಿಗೆ ಚರ್ಚಿಸಲಾಗಿದೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು. ಗೃಹ ಇಲಾಖೆಗೆ ಸಹಕಾರ ನೀಡಬೇಕು. ಬಂದ್ ಸಂದರ್ಭದಲ್ಲಿ ತುರ್ತು ಸೇವೆಗಳಾದ ಆಸ್ಪತ್ರೆ, ಔಷಧಿ ಮಳಿಗೆ, ಆ್ಯಂಬುಲೆನ್ಸ್, ಹಾಲು, ತರಕಾರಿ ಸೇರಿದಂತೆ ಅಗತ್ಯ ಸೇವೆಗಳಿಗೆ ಯಾವುದೇ ಅಡ್ಡಿಯಿಲ್ಲದೆ ಯಥಾಸ್ಥಿತಿ ಮುಂದುವರೆಯುತ್ತವೆ. ಶಾಲೆ-ಕಾಲೇಜುಗಳ ರಜೆ ಕುರಿತು ಆಯಾ ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಲು ಈಗಾಗಲೇ ನಿರ್ದೇಶಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News