ಉಡುಪಿ: ಅಗಲಿದ ಬಂಟ ಸಮುದಾಯದವರಿಗೆ ನುಡಿನಮನ
ಉಡುಪಿ, ಜ.7: ಬಂಟರ ಸಂಘ ಉಡುಪಿ ವತಿಯಿಂದ ಇತ್ತೀಚೆಗೆ ನಿಧನ ರಾದ ಐಪಿಎಸ್ ಅಧಿಕಾರಿ ಡಾ.ಮಧುಕರ ಶೆಟ್ಟಿ, ಕಂಬಳ ಕ್ಷೇತ್ರದ ಮೇರು ಸಾಧಕ ವಿಶ್ವನಾಥ ಶೆಟ್ಟಿ ಹಾಗೂ ಬೈಲೂರು ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರೋಹಿತ್ ಎಂ.ಶೆಟ್ಟಿ ಅವರಿಗೆ ನುಡಿ ನಮನ ಕಾರ್ಯಕ್ರಮವು ರವಿವಾರ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಜರಗಿತು.
ಅಧ್ಯಕ್ಷತೆ ವಹಿಸಿದ್ದ ಉಡುಪಿ ಬಂಟರ ಸಂಘದ ಅಧ್ಯಕ್ಷ ಜಯಕರಶೆಟ್ಟಿ ಇಂದ್ರಾಳಿ ಮಾತನಾಡಿ, ಡಾ.ಮಧುಕರ ಶೆಟ್ಟಿ ಪೊಲೀಸ್ ಇಲಾಖೆಯಲ್ಲಿ ದಕ್ಷ, ಪ್ರಮಾಣಿಕ ಅಧಿಕಾರಿಯಾಗಿದ್ದು ಸಮಾಜಕ್ಕೆ ಉತ್ತಮ ಸೇವೆ ನೀಡಿದ್ದರು. ಕಂಬಳ ಕ್ಷೇತ್ರದಲ್ಲಿ ಆಧುನಿಕ ಸ್ಪರ್ಶ ನೀಡಿ ಕಂಬಳದ ಮೆರುಗನ್ನು ಹೆಚ್ಚಿಸಿದ ಕರಿಂಜೆ ವಿಶ್ವನಾಥ ಶೆಟ್ಟಿ, ಸದಾ ಬಡವರ ಬಗ್ಗೆ ಕಾಳಜಿ ವಹಿಸಿ ಬಡ ಹೆಣ್ಣು ಮಕ್ಕಳ ಮಂಗಳ ಸೂತ್ರದ ಪ್ರಾಯೋಜಕತ್ವ ನೀಡಿದ್ದರು ಎಂದರು.
ಈ ಸಂದರ್ಭದಲ್ಲಿ ಹಿರಿಯರಾದ ಕಪ್ಪೆಟ್ಟು ಗುಂಡು ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೊಗೀಶ್ ವಿ.ಶೆಟ್ಟಿ, ಬ್ರಹ್ಮಾವರ ಬಂಟರ ಸಂಘದ ಅಧ್ಯಕ್ಷ ಭುಜಂಗ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಶೆಟ್ಟಿ ನುಡಿನಮನ ಸಲ್ಲಿಸಿದರು. ಉಡುಪಿ ಜಿಲ್ಲೆಯ ಬಂಟರ ಸಂಘಗಳ ಅಧ್ಯಕ್ಷರು, ಪದಾದಿಕಾರಿಗಳು, ಇತರ ಸಮಾಜ ಬಾಂಧ ವರು ಭಾಗವಹಿಸಿ ಪುಷ್ಪನಮನ ಸಲ್ಲಿಸಿ, ಸಂತಾಪ ಸೂಚಿಸಿದರು.