ಜ.8ರಂದು ದಾವಣಗೆರೆಯ ಶಾಲಾ ಕಾಲೇಜ್‍ಗಳಿಗೆ ರಜೆ ಘೋಷಣೆ

Update: 2019-01-07 16:02 GMT

ದಾವಣಗೆರೆ,ಜ.7: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಜ.8 ಮತ್ತು 9 ರಂದು ಕರೆ ನೀಡಿರುವ 'ಭಾರತ್ ಬಂದ್'ಗೆ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿದೆ.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ ಜ.8 ರಂದು ಶಾಲಾ ಕಾಲೇಜ್‍ಗಳಿಗೆ ರಜೆ ಘೋಷಿಸಿದ್ದಾರೆ. ಬಂದ್ ಯಶಸ್ವಿಗಾಗಿ ಕಳೆದ ಮೂರು ದಿನಗಳಿಂದ ಸಿಪಿಐ ಸೇರಿದಂತೆ ಎಡಪಕ್ಷಗಳು ದಾವಣಗೆರೆ ನಗರದ ವಿವಿಧ ಭಾಗಗಳಲ್ಲಿ ಜನಜಾಗೃತಿ ಮೂಡಿಸುವ ಕೆಲಸ ಮಾಡಿವೆ. ಸೋಮವಾರ ಬೈಕ್ ರ‍್ಯಾಲಿ ನಡೆಸುವ ಮೂಲಕ ಜನರಲ್ಲಿ ಬಂದ್‍ಗೆ ಸಹಕಾರ ನೀಡುವಂತೆ ಕೋರಿದರು.

ಸಾರಿಗೆ ಇಲಾಖೆಯ ನೌಕರರ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಬಹುತೇಕ ಸಾರಿಗೆ ವ್ಯತ್ಯಯ ಉಂಟಾಗಲಿದೆ. ಅಲ್ಲದೇ ಬ್ಯಾಂಕ್ ನೌಕರರು ಭಾಗಹಿಸುವುದರಿಂದ ಬ್ಯಾಂಕ್‍ಗಳು ತೆರೆದರೂ ಸಹ ಸೇವೆಯಲ್ಲಿ ತೊಂದರೆಯಾಗಲಿದೆ. ಬೀದಿ ಬದಿ ವ್ಯಾಪಾರಿಗಳು, ಅಂಗನವಾಡಿಗಳು ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದು ಬಂದ್‍ಗೆ ಬಹುತೇಕ ಬೆಂಬಲ ದೊರೆಯಲಿದೆ.    

ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಜ.7,8 ಮತ್ತು 9 ರಂದು ನಡೆಯಬೇಕಿದ್ದ, ಸ್ನಾತಕೋತ್ತರ ರಾಸಾಯನ ಶಾಸ್ತ್ರ ಪರೀಕ್ಷೆಗಳನ್ನು ಬಂದ್ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಇದೇ ಪರೀಕ್ಷೆಯು ಜ.10,13,14 ರಂದು ನಡೆಯಲಿದೆ ಎಂದು ದಾವಣಗೆರೆ ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News