×
Ad

ತಲಪಾಡಿ: ಫಲಾಹ್ ಕಾಲೇಜಿನ ವಾರ್ಷಿಕೋತ್ಸವ

Update: 2019-01-07 21:35 IST

ಮಂಗಳೂರು, ಜ.7: ತಲಪಾಡಿ ಸಮೀಪದ ಕೆ.ಸಿ.ರೋಡ್‌ನ ಫಲಾಹ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಫಲಾಹ್‌ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಹಾಜಿ ಯು.ಬಿ. ಮುಹಮ್ಮದ್‌ರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.

ಈ ಸಂದರ್ಭ ಉಚಿತ ಸ್ಪೋಕನ್ ಇಂಗ್ಲಿಷ್ ಕೋರ್ಸ್ ಪೂರ್ತಿಗೊಳಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಚಟುಚಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸಂಸ್ಥೆಯ ಸಂಚಾಲಕ, ವಕೀಲ ಮುಝಫರ್ ಅಹ್ಮದ್, ಕೋಶಾಧಿಕಾರಿ ಇಸ್ಮಾಯೀಲ್ ನಾಗತೋಟ, ಅಬ್ಬಾಸ್ ಉಚ್ಚಿಲ್ ಮಾತನಾಡಿದರು. ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಸಲಾಂ ಉಚ್ಚಿಲ್, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ನೂರುಲ್ ಮೆಹಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಯಿಶಾ ಸಬೀನಾ ಕೈಸೀರನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿದ್ಯಾ ಡಿಸೋಜ, ಕಾಲೇಜಿನ ಉಪನಾಯಕಿ ಝುನೈರಾ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್ ಪಡುಬಿದ್ರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ನಾಯಕಿ ಫಮೀಝಾ ವಾರ್ಷಿಕ ವರದಿ ವಾಚಿಸಿದರು. ಆಯಿಶಾ ಸುಲ್ತಾನಾ ಸ್ವಾಗತಿಸಿದರು. ನೌಶೀನಾ ವಂದಿಸಿದರು.ವಿದ್ಯಾರ್ಥಿನಿ ಹಝೀನಾ ಡಿ.ಎಚ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News