ಕ್ರಿಕೆಟ್ ಬುಕ್ಕಿಯ ಗಡಿಪಾರಿಗೆ ಲಂಡನ್ ನ್ಯಾಯಾಲಯ ಅನುಮತಿ
Update: 2019-01-07 22:08 IST
ಲಂಡನ್, ಜ. 7: ಕ್ರಿಕೆಟ್ ಬುಕ್ಕಿ ಸಂಜೀವ್ ಚಾವ್ಲಾರನ್ನು ಭಾರತಕ್ಕೆ ಗಡಿಪಾರು ಮಾಡಲು ಯಾವುದೇ ಅಡಚಣೆ ಇಲ್ಲ ಎಂದು ಲಂಡನ್‌ನ ವೆಸ್ಟ್‌ಮಿನ್ ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೋಮವಾರ ಬ್ರಿಟನ್ ಗೃಹ ಕಾರ್ಯದರ್ಶಿಗೆ ಶಿಫಾರಸು ಮಾಡಿದೆ.
ವೆಸ್ಟ್‌ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 2017ರ ಅಕ್ಟೋಬರ್‌ನಲ್ಲಿ ನೀಡಿದ ತೀರ್ಪಿನಲ್ಲಿ, ಚಾವ್ಲಾರ ಗಡಿಪಾರಿಗೆ ನಿಷೇಧ ಹೇರಿತ್ತು.
ಆದರೆ, ಕಳೆದ ವರ್ಷದ ನವೆಂಬರ್‌ನಲ್ಲಿ ಹೈಕೋರ್ಟ್ ಈ ತೀರ್ಪನ್ನು ಬದಿಗೆ ಸರಿಸಿ, ಬುಕ್ಕಿಯನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಆದೇಶಿಸಿತ್ತು.
ಈ ಹಿನ್ನೆಲೆಯಲ್ಲಿ, ತನ್ನ ತೀರ್ಪನ್ನು ಮರುಪರಿಶೀಲಿಸಿದ ವೆಸ್ಟ್‌ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಆತನ ಗಡಿಪಾರಿಗೆ ಇರುವ ಎಲ್ಲ ಅಡೆತಡೆಗಳನ್ನು ನಿವಾರಿಸಿದೆ.