ಕಾಂಗ್ರೆಸ್ ಶಾಸಕ ಸುಧಾಕರ್ ವಿರುದ್ಧ ಸಚಿವ ರೇವಣ್ಣ ವಾಗ್ದಾಳಿ

Update: 2019-01-07 16:42 GMT

ಬೆಂಗಳೂರು, ಜ.7: ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಸಂಬಂಧ ನಮ್ಮ ಕುಟುಂಬದ ವಿರುದ್ಧ ಆರೋಪ ಮಾಡಲು ಆತ ಯಾರು ಎಂದು ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಹಂಚಿಕೆಯಾಗಿರುವ ನಿಗಮ, ಮಂಡಳಿಗಳನ್ನು ನಾವು ಯಾಕೆ ತೆಗೆದುಕೊಳ್ಳೋಣ. ನಾವು ನಮ್ಮ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದೇವೆಯೇ ಹೊರತು, ಬೇರೆ ಜಿಲ್ಲೆಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ನಮ್ಮ ಪಕ್ಷಕ್ಕೆ ಹಂಚಿಕೆಯಾಗಿರುವ ನಿಗಮ, ಮಂಡಳಿಗಳಿಗೆ ಯಾರನ್ನು ನೇಮಕ ಮಾಡಬೇಕು ಎಂಬುದರ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮುಖ್ಯಮಂತ್ರಿ ತೀರ್ಮಾನ ಮಾಡುತ್ತಾರೆ. ಆದರೆ, ನಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ನಮ್ಮ ಅಭಿಪ್ರಾಯವನ್ನು ದೇವೇಗೌಡರು, ಕುಮಾರಸ್ವಾಮಿ ಇಬ್ಬರೂ ಕೇಳಬೇಕು. ಇಲ್ಲದಿದ್ದರೆ ನಮ್ಮ ದಾರಿ ನಮಗೆ, ಅವರ ದಾರಿ ಅವರಿಗೆ ಎಂದು ರೇವಣ್ಣ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News