ವಿಧಾನಸಭೆ ಕಾರ್ಯದರ್ಶಿ ಸೇವೆಯಿಂದ ಅಮಾನತು ವಿಚಾರ: ಹೈಕೋರ್ಟ್ ಮೆಟ್ಟಿಲೇರಿದ ಎಸ್.ಮೂರ್ತಿ

Update: 2019-01-07 17:00 GMT

ಬೆಂಗಳೂರು, ಜ.7: ಸೇವೆಯಿಂದ ಅಮಾನತುಗೊಳಿಸಿ ವಿಧಾನಸಭೆ ಸಚಿವಾಲಯದ ವಿಶೇಷ ಮಂಡಳಿ ಹೊರಡಿಸಿದ ಆದೇಶ ಪ್ರಶ್ನಿಸಿ ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿಯಲ್ಲಿ ವಿಧಾನಸಭೆ ವಿಶೇಷ ಮಂಡಳಿ, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನಸಭೆಯ ಪ್ರಭಾರ ಕಾರ್ಯದರ್ಶಿಯವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹೈಕೋರ್ಟ್ ವೆಬ್‌ಸೈಟ್ ಮಾಹಿತಿ ಪ್ರಕಾರ ಜ.3ರಂದು ಅರ್ಜಿ ದಾಖಲಿಸಲಾಗಿದ್ದು, ಕೇಸ್ ನಂಬರ್ ಡಬ್ಲೂಪಿ 537/2019 ಎಂದು ನಮೂದು ಆಗಿದೆ.

2016 ಹಾಗೂ 2017ನೆ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿಗಳಲ್ಲಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪದ ಹಿನ್ನೆಲೆಯಲ್ಲಿ ವಿಧಾನಸಭೆಯ ಸ್ಪೀಕರ್ ಅವರ ಟಿಪ್ಪಣೆ ಹಾಗೂ ವಿಧಾನಸಭೆ ಸಚಿವಾಲಯದ ವಿಶೇಷ ಮಂಡಳಿಯ ಆದೇಶದ ಅನುಸಾರ ಎನ್. ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಿ 2018ರ ಡಿ.27ರಂದು ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು. ಇದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News