‘ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಟ್ರೈಲರ್ ನಿಷೇಧಕ್ಕೆ ಹೈಕೋರ್ಟ್ ನಕಾರ

Update: 2019-01-07 17:02 GMT

ಹೊಸದಿಲ್ಲಿ, ಜ.7: ‘ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಸಿನೆಮದ ಟ್ರೈಲರ್ ಪ್ರದರ್ಶನವನ್ನು ನಿಷೇಧಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ತಳ್ಳಿ ಹಾಕಿರುವ ದಿಲ್ಲಿ ಹೈಕೋರ್ಟ್, ಈ ವಿಷಯದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸಲಹೆ ನೀಡಿದೆ.

ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಸಿನೆಮಟೋಗ್ರಾಫ್ ಕಾಯ್ದೆಯ ನಿಬಂಧನೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಮತ್ತು ದೇಶದ ಪ್ರಧಾನಮಂತ್ರಿಗಳ ಕಚೇರಿಯ ಪ್ರತಿಷ್ಠೆಗೆ ಹಾನಿ ಎಸಗಲಾಗಿದೆ ಮತ್ತು ಈ ಪ್ರತಿಷ್ಟಿತ ಕಚೇರಿಗೆ ದೇಶ ಮತ್ತು ವಿದೇಶದಲ್ಲಿ ಕೆಟ್ಟ ಹೆಸರು ಬರುವಂತೆ ಆಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆದರೆ, ತಾನು ಅರ್ಜಿಯಲ್ಲಿ ತಿಳಿಸಿರುವ ವಿವಾದವನ್ನು ಪರಿಶೀಲಿಸಿಲ್ಲ ಎಂದು ತಿಳಿಸಿದ ನ್ಯಾಯಮೂರ್ತಿ ವಿಭು ಬಖ್ರು, ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸುವಂತೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News