ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಯತ್ನ
Update: 2019-01-07 23:32 IST
ಮೈಸೂರು,ಜ.7: ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೋರ್ವರು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಮಹದೇಶ್ವರ ಬಡಾವಣೆಯಲ್ಲಿಂದು ನಡೆದಿದೆ.
ಇಂದು ಬೆಳಿಗ್ಗೆ ವಿಜಯನಗರ ಮಹದೇಶ್ವರ ಬಡಾವಣೆಯ ನಿವಾಸಿ ಶ್ವೇತಾ(19) ಎಂಬಾಕೆ ಕೌಟುಂಬಿಕ ಕಲಹದಿಂದ ಮನನೊಂದು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ನೋವು ತಾಳಲಾರದೆ ಈ ವೇಳೆ ಜೋರಾಗಿ ಕಿರುಚಿಕೊಂಡಿದ್ದು, ಇದನ್ನು ಗಮನಿಸಿದ ಅಕ್ಕಪಕ್ಕದವರು ಬಂದು ಶ್ವೇತಾರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಬಿ.ಜಿ.ಕುಮಾರ್ ಮತ್ತು ಸಿಬ್ಬಂದಿಗಳು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.