ಮೋದಿ- ಟ್ರಂಪ್ ದೂರವಾಣಿ ಮೂಲಕ ಚರ್ಚಿಸಿದ್ದೇನು ?

Update: 2019-01-08 04:45 GMT

ವಾಷಿಂಗ್ಟನ್, ಜ. 8: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಭಾರತದ ಜತೆಗೆ ಅಮೆರಿಕದ ವ್ಯಾಪಾರ ಕೊರತೆಯನ್ನು ಕಡಿಮೆ ಮಾಡುವುದು ಹಾಗೂ ಅಫ್ಘಾನಿಸ್ತಾನ ವಿಚಾರದಲ್ಲಿ ಪರಸ್ಪರ ಸಹರಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಸೋಮವಾರ ದೂರವಾಣಿ ಮೂಲಕ ಚರ್ಚಿಸಿದ್ದಾರೆ ಎಂದು ಶ್ವೇತಭವನ ಪ್ರಕಟಿಸಿದೆ.

"2019ರಲ್ಲಿ ಉಭಯ ದೇಶಗಳ ಪ್ರಮುಖ ಪಾಲುದಾರಿಕೆಯನ್ನು ಮತ್ತಷ್ಟು ಬಲಗೊಳಿಸಲು ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಜತೆಗೆ ಅಮೆರಿಕ ಭಾರತದ ಜತೆ ಹೊಂದಿರುವ ವ್ಯಾಪಾರ ಕೊರತೆಯನ್ನು ಹೇಗೆ ಕಡಿಮೆ ಮಾಡಬಹುದು ಎಂಬ ಬಗ್ಗೆಯೂ ಚರ್ಚಿಸಿದರು. ಇಂಡೋ- ಫೆಸಿಫಿಕ್ ಪ್ರದೇಶದಲ್ಲಿ ಭದ್ರತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವ ಮಾರ್ಗೋಪಾಯಗಳ ಬಗ್ಗೆ ಮತ್ತು ಅಪ್ಘಾನಿಸ್ತಾನ ವಿಚಾರದಲ್ಲಿ ಸಹಕಾರ ಹೆಚ್ಚಿಸುವ ನಿರ್ಧಾರಕ್ಕೆ ಬಂದಿವೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

ವ್ಯಾಪಾರ ಕೊರತೆಯನ್ನು ಕಡಿಮೆ ಮಾಡುವ ಮತ್ತು ಅಮೆರಿಕದ ಉತ್ಪಾದನಾ ವಲಯದ ಉದ್ಯೋಗವನ್ನು ಹೆಚ್ಚಿಸುವ ದೃಷ್ಟಿಯಿಂದ ಭಾರತದಿಂದ ಆಮದಾಗುವ ಉಕ್ಕು ಮತ್ತು ಅಲ್ಯೂಮೀನಿಯಂ ಮೇಲೆ ಅಮೆರಿಕ ಆಮದು ಸುಂಕವನ್ನು ವಿಧಿಸಿದೆ. ಭಾರತ ಕೂಡಾ ಇದಕ್ಕೆ ಪ್ರತಿಯಾಗಿ ಕ್ರಮ ಕೈಗೊಳ್ಳಲಿದೆ. ಆದರೆ ಮಾಸಾಂತ್ಯದ ವರೆಗೆ ಕಾದು ನೋಡಲಾಗುವುದು ಎಂದು ಭಾರತ ಪ್ರಕಟಿಸಿತ್ತು.

ಅಪ್ಘಾನಿಸ್ತಾನದಲ್ಲಿ ಅಮೆರಿಕದ 14 ಸಾವಿರಕ್ಕೂ ಹೆಚ್ಚು ಯೋಧರು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 5000 ಭದ್ರತಾ ಸಿಬ್ಬಂದಿಯನ್ನು ಕಡಿಮೆ ಮಾಡಲು ಕೂಡಾ ಅಮೆರಿಕ ನಿರ್ಧರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News