ಜ. 10: ದೇರಳಕಟ್ಟೆ ಪ್ರತಿಭೋತ್ಸವ
ಮಂಗಳೂರು, ಜ.8: ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ದೇರಳಕಟ್ಟೆ ಬೆಳ್ಮ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ‘ಪ್ರತಿಭೋತ್ಸವ 2018-19’ ಕಾರ್ಯಕ್ರಮವು ದಿ. ತಿಮ್ಮಪ್ಪ ಮೇಲಾಂಟ ವೇದಿಕೆಯಲ್ಲಿ ಜ. 10 ರಂದು ಸಾಯಂಕಾಲ 4ರಿಂದ ಶಾಲೆಯ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಎ. ಖಾದರ್ ವಹಿಸಲಿದ್ದಾರೆ. ಮೂಕ್ಯ ಅತಿಥಿಗಳಾಗಿ ರಾಜ್ಯ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಬಾನು, ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ತಾಲೂಕು ಪಂಚಾಯತ್ ಸ್ದಸ್ಯೆ ನೂರ್‌ಜಹಾನ್, ಬೆಳ್ಮ ಗ್ರಾ. ಪಂ. ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ಪಿಡಿಒ ನವೀನ್ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಅಯ್ಯಪ್ಪ ದೇವಸ್ಥಾನದ ಆಡಳಿತ ಮುಕ್ತೇಸರರಾದ ಸೀತಾರಾಮ ಶೆಟ್ಟಿ, ನಾರಾಯಣ ಶೆಟ್ಟಿ, ನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಅದ್ಯಕ್ಷ ಹಾಜೀ ಇಲ್ಯಾಸ್, ಉದ್ಯಮಿ ರಾಧಾಕೃಷ್ಣ ರೈ ಉಮಿಯ, ಪಾನೀರು ಜುಮ್ಮಾ ಮಸೀದಿ ಆದ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್, ಹಳೆವಿದ್ಯಾರ್ಥಿಸಂಘದ ಗೌರವಾಧ್ಯಕ್ಷ ಸುರೇಶ್ ಚೌಟ, ದೇರಳಕಟ್ಟೆ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಹಾಜಿ ಅಬೂಬಕರ್ ಮತ್ತಿತರ ಗಣ್ಯರು ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ನಿವೃತ್ತ ಅಧ್ಯಾಪಕ ಗಣೇಶ್ ರಾವ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ಎ. ಖಾದರ್ ತ್ರಿಸ್ಟಾರ್ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಸೆಲ್ವಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.